ಮೂಡುಬಿದಿರೆ ಬಂಟರ ಮಹಿಳಾ ಘಟಕದಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ಮತ್ತು ಆಯುಷ್ಮಾನ್ ಕಾಡ್೯ ಅಭಿಯಾನ

ಮೂಡುಬಿದಿರೆ ಬಂಟರ ಮಹಿಳಾ ಘಟಕದಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ಮತ್ತು ಆಯುಷ್ಮಾನ್ ಕಾಡ್೯ ಅಭಿಯಾನ


ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ, ಬಂಟರ ಮಹಿಳಾ ಘಟಕ ಮೂಡುಬಿದಿರೆ ಹಾಗೂ ಛಾಯಾ ಗ್ರಾಮ ವನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ  ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವು ಶುಕ್ರವಾರ ಸಮಾಜ ಮಂದಿರದಲ್ಲಿ ನಡೆಯಿತು. 


ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಬಂಟರ ಸಂಘದ ಕಾರ್ಯದರ್ಶಿ  ಕೆ.ಪಿ. ಸುಚರಿತ ಶೆಟ್ಟಿ, ಉಪಾಧ್ಯಕ್ಷ ಚೇತನ್ ಕುಮಾರ್ ಶೆಟ್ಟಿ ಹಾಗೂ ಛಾಯಾ ಗ್ರಾಮವನ್ ಮುಖ್ಯಸ್ಥೆ ಪ್ರಿಯಾ ಶೆಟ್ಟಿ, ಬಂಟರ ಸಂಘದ ಉಪ ಕಾರ್ಯದರ್ಶಿಗಳಾದ ಶಿವಪ್ರಸಾದ್ ಹೆಗ್ಡೆ  ಅತಿಥಿಗಳಾಗಿ ಭಾಗವಹಿಸಿದ್ದರು. 

ಮಹಿಳಾ ಘಟಕದ ಕಾರ್ಯದರ್ಶಿ ಸಂಗೀತಾ ಶೆಟ್ಟಿ ,  ಕೋಶಾಧಿಕಾರಿ  ಗೀತಾ ಪಿ.ಶೆಟ್ಟಿ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂರಕ್ಕೂ ಅಧಿಕ ಜನರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article