ಮೂಡುಬಿದಿರೆ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕತ೯ರಿಗೆ ಅಂಚೆ ವಿಮೆ ನೋಂದಣಿ
Friday, October 30, 2026
ಮೂಡುಬಿದಿರೆ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರಿಗೆ ಸಮಗ್ರ ಅಪಘಾತ ಸುರಕ್ಷಾ ವಿಮೆ ನೋಂದಾಣಿ ಕಾರ್ಯಕ್ರಮ ಇಲ್ಲಿನ ಪ್ರೆಸ್‍ಕ್ಲಬ್‍ನಲ್ಲಿ ಶುಕ್ರವಾರ ನಡೆಯಿತು.
ಅಂಚೆ ಇಲಾಖೆಯ ಮಾರುಕಟ್ಟೆ ಅಧಿಕಾರಿ ಗುರುಪ್ರಸಾದ್ ಅವರು ಪತ್ರಕತ೯ರಿಗೆ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಕಾರ್ಡ್ ವಿತರಿಸಿ ಮಾತನಾಡಿ, ಸುದ್ದಿ ಸಂಗ್ರಹಕ್ಕಾಗಿ ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕತಕರ್ತರಿಗೆ ಅಂಚೆ ಇಲಾಖೆಯ ಅಪಘಾತ ಸುರಕ್ಷಾ ವಿಮೆ ಹೆಚ್ಚು ಪ್ರಯೋಜನ ನೀಡಲಿದೆ. ಕನಿಷ್ಟ ಪ್ರೀಮಿಯಂನಲ್ಲಿ ಗರಿಷ್ಟ ಮೊತ್ತದ ವಿಮಾ ಸೌಲಭ್ಯದ ಈ ಪಾಲಿಸಿ ಸಮಾಜದ ಎಲ್ಲಾ ವರ್ಗದವರು ನೋಂದಾಯಿಸಿಕೊಳ್ಳಬಹುದು ಎಂದರು.
ಮೂಡುಬಿದಿರೆ ಪ್ರೆಸ್‍ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಮಾತನಾಡಿ ಜಿಲ್ಲಾ ಸಂಘದ ವತಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಹಲವು ವರ್ಷಗಳಿಂದ ಅಪಘಾತ ವಿಮೆ ಪಾಲಿಸಿಯನ್ನು ನೋಂದಾಯಿಸಿಕೊಂಡು ಬರಲಾಗುತ್ತಿದೆ. ಇದರ ಪ್ರೀಮಿಯಂ ಹಣವನ್ನು ಜಿಲ್ಲಾ ಸಂಘದ ಕ್ಷೇಮ ನಿಧಿಯಿಂದ ಭರಿಸಲಾಗುತ್ತದೆ ಎಂದರು.
ಸಂಘದ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಅಂಚೆ ಪೇದೆ ಅರವಿಂದ್ ಉಪಸ್ಥಿತರಿದ್ದರು.
ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್ ಸ್ವಾಗತಿಸಿದರು. ಪ್ರೆಸ್‍ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ವಂದಿಸಿದರು.
