ಕ್ರೀಡಾಕೂಟಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ: ವಿರೂಪಾಕ್ಷಪ್ಪ
ಅವರು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲ್ಲಬೆಟ್ಟು ಇದರ ಆತಿಥ್ಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ 14ರ ವಯೋಮಿತಿಯ ಶಾಲಾ ಮಕ್ಕಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಪಟುಗಳು ಗೆಲ್ಲುವ ಮನೋಸ್ಥಿತಿಯೊಂದಿಗೆ ಕ್ರೀಡಾಂಗಣಕ್ಕೆ ಇಳಿಯಬೇಕು, ಆದರೆ ಸೋಲು ಗೆಲುವಿನ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರಂತರ ಭಾಗವಹಿಸುವ ಉತ್ಸಾಹವನ್ನು ಉಳಿಸಿಕೊಂಡು ಕ್ರೀಡಾಸ್ಪೂರ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಅಜೀಜ್ ಅವರ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ತಾಲೂಕು ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ನಾಗೇಶ್, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರುಗಳಾದ ಶ್ರೀಮತಿ ಮಹೇಶ್ವರಿ, ಡಾ. ರಾಮಕೃಷ್ಣ ಶಿರೂರು, ನವೀನ್ ಚಂದ್ರ ಅಂಬೂರಿ, ಸುಧೀರ್, ಶಶಿಕಾಂತ ವೈ., ನಾಗರತ್ನ ಶಿರೂರು, ವಿನ್ನಿಫ್ರೆಡ್ ಗ್ರೇಸಿ ಪಿಂಟೋ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಗ್ಲೆಂಡಾ ಕ್ಲೆಮೆಂಟ್ ಡೇಸಾ ಸ್ವಾಗತಿಸಿದರು. ವಿದ್ಯಾಥಿ೯ಗಳು ಪ್ರಾಥಿ೯ಸಿದರು. ವಿದ್ಯಾರ್ಥಿ ತಿಲಕಚಂದ್ರ ಪ್ರತಿಜ್ಞಾವಿಧಿ ಬೋಧಿಸಿದರು. ಅನಿತಾ ಸಿಕ್ವೇರಾ ನಿರೂಪಿಸಿದರು. ಶಿಕ್ಷಕಿ ಆಶಾ ವಂದಿಸಿದರು.