ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ


ಪಣಜಿ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯರು ಸುಮಾರು 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ (CPR) ನೀಡಿ ರಕ್ಷಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಗುರುವಾರ ಮುಂಜಾನೆ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರ ಸತತ ಪ್ರಯತ್ನದ ನಡುವೆಯೂ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಬೆಳಗ್ಗೆ 5.10ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಮಣಿಪಾಲ್ ಆಸ್ಪತ್ರೆಯ ಆಂಕೊಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ಅವರು, “ನಾನಾ ಪಾಟೇಕರ್ ಅವರನ್ನು ಉಳಿಸಲು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನಡೆಸಲಾಯಿತು. ಆದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ” ಎಂದು ತಿಳಿಸಿದ್ದಾರೆ. ವೈದ್ಯಕೀಯ-ಕಾನೂನು ಪ್ರಕರಣ ದಾಖಲಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ.

ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ವಿಭಿನ್ನ ಹಾಗೂ ಪ್ರಭಾವಶಾಲಿ ಅಭಿನಯದ ಮೂಲಕ ಗುರುತಿಸಿಕೊಂಡಿದ್ದ ನಾನಾ ಪಾಟೇಕರ್ ಅವರ ನಿಧನದಿಂದ ಭಾರತೀಯ ಚಿತ್ರರಂಗದಲ್ಲಿ ಶೋಕ ಆವರಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article