ಸಂತ ಫಿಲೋಮಿನಾ ಪ.ಪೂ. ಕಾಲೇಜಿಗೆ ‘ಪ್ರೇರಣ-ಸೈನ್ಸ್ ಫೆಸ್ಟ್-2026’: ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ
Thursday, October 29, 2026
ಪುತ್ತೂರು: ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು, ದೇರಳಕಟ್ಟೆ, ಮಂಗಳೂರು ಇದರ ಆಶ್ರಯದಲ್ಲಿ ಅ.27 ಮತ್ತು 28 ರಂದು ನಡೆದ ‘ಪ್ರೇರಣ-ಸೈನ್ಸ್ ಟೆಸ್ಟ್-2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವೈಶಾಖ್, ಶ್ರೀಯಾ ಆರ್.ವಿ ಮತ್ತು ಮೊಹಮ್ಮದ್ ಶಯನ್ ಅಬ್ಬಾಸ್ ಇವರು ಶಾರ್ಕ್ ಟ್ಯಾಂಕ್ ಗ್ರೂಪ್ ಮಾಡೆಲ್ ಮೇಕಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.