ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗ್ರಹ ಶಿಕ್ಷೆ

ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗ್ರಹ ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುತ್ತೂರು ತಾಲೂಕು ರೆಂಜಲಾಡಿ ಗ್ರಾಮದ ಪೆಲತ್ರಾಣೆ ಮನೆ ನಿವಾಸಿ ಸದ್ದಾಂ ಎಂಬಾತನಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ.50,000 ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರ

ಆರೋಪಿಯು 2018 ನೇ ಜೂನ್ ತಿಂಗಳಿನಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜಿ ಮನೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ  ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕೆ. ತನಿಖೆ ನಡೆಸಿದ್ದು, ಅನಂತರ ವೃತ್ತ ನಿರೀಕ್ಷಕರಾಗಿದ್ದ ಡಿ. ಮಂಜುನಾಥ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು 22 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಆರೋಪಿ ತಪ್ಪಿತಸ್ತ ಎಂದು ಪರಿಗಣಿಸಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 

ಸಂತ್ರಸ್ತೆ ಬಾಲಕಿಗೆ 12 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article