ಸಂತ ಫಿಲೋಮಿನಾ ಕಾಲೇಜು: ‘ರಾಜ್ಯಮಟ್ಟದ ಅಂತರ್ ಕಾಲೇಜು ಬಿಜ್‌ಫೆಸ್ಟ್-2K26’

ಸಂತ ಫಿಲೋಮಿನಾ ಕಾಲೇಜು: ‘ರಾಜ್ಯಮಟ್ಟದ ಅಂತರ್ ಕಾಲೇಜು ಬಿಜ್‌ಫೆಸ್ಟ್-2K26’


ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು.


ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.


ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಿಸಿದರು. 

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವುದು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್ ಆಯೋಜನೆ ಮುಖ್ಯ ಉದ್ದೇಶವಾಗಿತ್ತು. 

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ:

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಂಗಳೂರು ತ್ರಿಶಾ ಕಾಲೇಜು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. 

ವಿಜೇತರಿಗೆ ಪ್ರಶಸ್ತಿ ಪ್ರದಾನ:

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article