ಸಂಸ್ಕೃತಿಯಲ್ಲಿ ಧೃಢ ನಂಬಿಕೆ ಶಕ್ತಿಯಾಗುತ್ತದೆ- ಪವನ್ ಕಿರಣಕೆರೆ: ಪ್ರೊ. ಪವನ್ ಕಿರಣಕೆರೆ
ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ ಹಾಗೂ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಚೈತನ್ಯಶೀಲವಾದ ಶಕ್ತಿಯಿಂದ ಸ್ಫೂರ್ತಿ ಪಡೆದ ಸ್ವಾಮಿ ವಿವೇಕಾನಂದರು ಭಾರತೀಯ ತತ್ವಗಳನ್ನು ಜಗತ್ತಿಗೆ ಸಾರಿದವರು. ನಾವು ನಮ್ಮ ಜೀವನದಲ್ಲಿ ಹೊಸ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾ ಸಂಸ್ಕೃತಿಯ ಮೇಲೆ ಧೃಢ ನಂಬಿಕೆಯಿಟ್ಟಾಗ ಆಗುವ ಪರಿಣಾಮಗಳನ್ನು ಕಂಡುಕೊಳ್ಳುತ್ತಾ ಸಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ. ಪಿ ಅವರು ಭಾರತ ದೇಶ ತಾಯ್ತನದ ಪ್ರತೀಕವಾಗಿದೆ. ವಿವೇಕಾನಂದರು ಭಾರತದ ಕೀರ್ತಿಯನ್ನು ಜಗತ್ತಿಗೆ ಪಸರಿಸಿ ಭಾರತೀಯರನ್ನು ಜಾಗೃತರನ್ನಾಗಿಸಿದವರು. ನಮ್ಮ ವೈಯುಕ್ತಿಕ ವಿಚಾರಧಾರೆಗಳು ಭಿನ್ನವಾದರೂ ಕೂಡಾ ಭಾರತೀಯರಾಗಿ ನಾವು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಒಂದಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಹಾಗು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿವೇಕಾನಂದ ಸ್ನಾತಕೋತ್ತರ ವಿಭಾಗದ ಡೀನ್ ಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ.ಎಸ್ ವಂದಿಸಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಾವತಿ.ಬಿ ಕಾರ್ಯಕ್ರಮ ನಿರೂಪಿಸಿದರು.