ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಮೊಹಮ್ಮದ್ ಶಾಜ್‌ಗೆ ಪ್ರಶಸ್ತಿ
Friday, October 9, 2026
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ.30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026-27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ. ಇವರಿಗೆ ಶಿಹಾಬ್ ಟಿ. ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.