ಪ್ರಜ್ವಲ್ಗೆ ವಿಶ್ವವಿದ್ಯಾನಿಲಯ ಮಟ್ಟದ ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
Wednesday, October 28, 2026
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
ಅಕ್ಟೋಬರ್ 22ರಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ)ದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕ್ರೀಡಾ ಸ್ಪರ್ಧೆಯ ಅಂಗವಾಗಿ ಆಯೋಜಿಸಲಾಗಿದ್ದ ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ಪ್ರಜ್ವಲ್ ಎಂ. ಅವರು ಈ ಸಾಧನೆ ಮಾಡಿದ್ದಾರೆ.
ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ, ಕಾಲೇಜಿನ ಆಡಳಿತ ಮಂಡಳಿ, ಬೋಧಕವರ್ಗ ಹಾಗೂ ವಿದ್ಯಾರ್ಥಿಗಳು ಪ್ರಜ್ವಲ್ ಎಂ. ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.