ವಿಷ ಸೇವಿಸಿ ಅಸ್ವಸ್ಥಗೊಂಡ ನವವಿವಾಹಿತೆ ಸಾವು
Monday, October 26, 2026
ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ನವವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ವೀರಮಂಗಲ ನಿವಾಸಿ ಸುಂದರ ಎಂಬವರ ಪತ್ನಿ ಮಮತ (32) ಮೃತಪಟ್ಟ ಮಹಿಳೆ.
ಮಮತ ಅವರು ಶನಿವಾರ ತನ್ನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.25ರಂದು ಮೃತಪಟ್ಟಿದ್ದಾರೆ.
ಮೃತರು ಗಂಡ ಸುಂದರ ಮತ್ತು ಮನೆಮಂದಿಯನ್ನು ಅಗಲಿದ್ದಾರೆ. ಘಟನೆ ಕುರಿತು ಪುತ್ತೂರು ಮಹಿಳಾ ಪೊಲೀಸರು ಅಸ್ವಸ್ಥ ಮಹಿಳೆಯ ಹೇಳಿಕೆಯಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ತಿಳಿದು ಬಂದಿದೆ.