ವೈಟ್ ಲಿಫ್ಟಿಂಗ್ ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Friday, October 2, 2026
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳು ಇದರ ಸಂಯುಕ್ತ ಆಶ್ರಯದಲ್ಲಿ ಸೆ.27 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026-27’ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಕಿಶನ್ ಪಿ.ಜೆ. ಪ್ರಥಮ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಮನೋಜ್ ಜಿ.ಬಿ. ದ್ವಿತೀಯ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಥಮ ವಿಜ್ಞಾನ ವಿಭಾಗದ ಎನ್. ವಿಜೇತಾ ಕುಲಾಲ್ ಹಾಗೂ ಸುಹಾನ್ ರೈ ಜೆ. ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಅಶ್ವತ್ ಕೆ.ಎಸ್. ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.