ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
Tuesday, October 6, 2026
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ.ವೈ., ತ್ರಿಶಿಕ್ ಕೆ. ಗೌಡ, ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ., ಅನ್ವಿತ್ ಎಸ್.ಪಿ., ನಿದೀಶ್ ಶೆಟ್ಟಿ, ಮನ್ವಂತ್. ದ್ವಿತೀಯ ಪಿಯುಸಿ ಪ್ರಣಮ್ ಪಿ. ಶೆಟ್ಟಿ, ಚಿಂತನ್ ಕೆ., ಕೆ.ಆರ್. ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್.ಆರ್. ರೈ, ವೀಕ್ಷಾ ಬಿ.ಆರ್., ಧರಣಿ ಕೆ.ಟಿ., ಶ್ರಾವ್ಯ, ಕೆ. ಸುಶಾನಿ, ಸಿ.ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್., ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ.ಆರ್. ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
