ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ವಿವೇಕಾನಂದ ಪ.ಪೂ. ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
Tuesday, October 6, 2026
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ.ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ.ಜಿ. ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್.ಎನ್. ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
