ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಾಂಧಿಸ್ಮೃತಿ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಾಂಧಿಸ್ಮೃತಿ ಕಾರ್ಯಕ್ರಮ


ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯಕ್ಷಕಲಾ ಕೇಂದ್ರ ಹಾಗೂ ವಿದ್ಯಾರ್ಥಿ ಸಂಘಗಳ ಜಂಟಿ ಆಶ್ರಯದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯ ಕುಮಾರ್ ಎಂ. ಅವರು ಮಾತನಾಡಿ, ಗಾಂಧೀಜಿಯವರ ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗುತ್ತವೆ. ಅವರ ಬೋಧನೆಗಳನ್ನು ಅರ್ಥೈಸಿಕೊಂಡಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯಕ್ಷಕಲಾ ಕೇಂದ್ರ ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ. ಚಂದ್ರಶೇಖರ್ ಸ್ವಾಗತಿಸಿದರು. ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article