BREAKING
ದಕ್ಷಿಣ ಕನ್ನಡ

ಎತ್ತರ ಜಿಗಿತ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ


ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್‌ನ ಆಶ್ರಯದಲ್ಲಿ ಅ.5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್-2026ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ.23 ಮತ್ತು 27ರಂದು ತಮಿಳುನಾಡಿನ ಜೆ.ಎನ್. ಕ್ರೀಡಾಂಗಣ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ.ಎಂ. ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರ.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು

📢 ಡೈಲಿ ಪಲ್ಸ್ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!