ಗುಂಡ್ಯ ಸಮೀಪ ಕಾರಿಗೆ ಕಡವೇ ಢಿಕ್ಕಿ: ಕಡವೆ ಸಾವು

ಗುಂಡ್ಯ ಸಮೀಪ ಕಾರಿಗೆ ಕಡವೇ ಢಿಕ್ಕಿ: ಕಡವೆ ಸಾವು


ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಢಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ.


ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕಡವೆ ಏಕಾಏಕಿ ಅಡ್ಡ ಬಂದಿದ್ದು, ಢಿಕ್ಕಿಯ ಪರಿಣಾಮ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ.

ಢಿಕ್ಕಿಯ ಬಳಿಕ ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿರುವುದು ಕಂಡುಬಂದಿದೆ.

ಘಟನೆಯಿಂದಾಗಿ ವಾಹನ ಸವಾರರಲ್ಲಿ ಆತಂಕ ಮೂಡಿದ್ದು, ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಇರುವುದರಿಂದ ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ.

ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಕಾಡುಪ್ರಾಣಿಗಳಿಂದ ವಾಹನಗಳಿಗೆ ಅಪಾಯ ಉಂಟಾಗಿರುವ ಘಟನೆಗಳು ನಡೆದಿವೆ.

ಕಾಡುಪ್ರಾಣಿಗಳ ಸಂಚಾರ ಇರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣ ಹಾಗೂ ರಸ್ತೆ ಬದಿಯ ಪೊದೆಗಳ ನಿರ್ವಹಣೆ ಅಗತ್ಯ ಎಂಬುದು ಸ್ಥಳೀಯರ ಅಭಿಪ್ರಾಯ.

ಈ ಕುರಿತು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article