ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಲಾರಿ ಅಪಘಾತ: ವಿಟ್ಲ ಮೂಲದ ಬಾಲಕ ಮೃತ್ಯು
Sunday, October 25, 2026
ಸುಳ್ಯ: ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.
ಭಾನುವಾರ ಬೆಳ್ಳಂ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಮೈಸೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲ ಮೂಲದ ನಾರಯಣ ಎಂಬುವವರು ಮೈಸೂರಿಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಉಂಟಾಗಿ 10 ವರ್ಷದ ಓರ್ವ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.