ಕೆ.ವಿ.ಜೆ. ವೈದ್ಯಕೀಯ ಕಾಲೇಜಿಗೆ ದಂಡ

ಕೆ.ವಿ.ಜೆ. ವೈದ್ಯಕೀಯ ಕಾಲೇಜಿಗೆ ದಂಡ

ಸುಳ್ಯ: ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ ಕಾಯಿದೆ ನವೀಕರಣ ಪರವಾನಿಗೆ ಪಡೆಯಲು ಅಗ್ನಿಶಾಮಕ ಇಲಾಖೆಯಿಂದ ಪಡೆದ ಪ್ರಮಾಣಪತ್ರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದ ಪ್ರಮಾಣಪತ್ರ ಸಲ್ಲಿಸದೇ, ಕಳೆದ ೩ ವರ್ಷಗಳಿಂದ ಕೆಪಿಎಂಇಎ ನವೀಕರಣ ಮಾಡದೇ ಇರುವುದರಿಂದ ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಂಡ ವಿಧಿಸಲಾಗಿದೆ.

ಕರ್ನಾಟಕ ಖಾಸಗಿ ವೈದ್ಯಕೀಯ ಸ್ಫಾಪನೆ ಕಾಯಿದೆ (ಕೆ.ಪಿ.ಎಂ.ಇ.ಎ) ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. 

ಕೆ.ಪಿ.ಎಂ.ಇ.ಎ ನವೀಕರಣ ಪರವಾನಿಗೆ ಪಡೆಯಲು ಅಗ್ನಿಶಾಮಕ ಇಲಾಖೆಯಿಂದ ಪಡೆದ ಪ್ರಮಾಣಪತ್ರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದ ಪ್ರಮಾಣಪತ್ರ ಸಲ್ಲಿಸದೇ ಕೆ.ಪಿ.ಎಂ.ಇ.ಎ ಪ್ರಮಾಣಪತ್ರ ನವೀಕರಣವನ್ನು 3 ವರ್ಷಗಳಿಂದ ಮಾಡದೇ ಇರುವುದರಿಂದ ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಪ್ರಸ್ತುತ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆದಿರುವ ಬಗ್ಗೆ ತಿಳಿಸಿದ್ದು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯಲು ಬಾಕಿ ಇರುತ್ತದೆ ಎಂದು ತಿಳಿಸಿದರು. ಕಳೆದ 3 ವರ್ಷದಿಂದ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿಯಾಗದೇ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿರುವುದು ಕೆ.ಪಿ.ಎಂ.ಇ ಕಾಯ್ದೆ ಮತ್ತು ಕಾನೂನಿನ ಉಲ್ಲಂಘನೆಯಾಗಿದೆ.. ಆದುದರಿಂದ ಈ ಪ್ರಕರಣದ ಕುರಿತು ಕೆ.ಪಿ.ಎಂ.ಇ ಕಾಯ್ದೆ 19(1)ರಂತೆ 1 ಲಕ್ಷ ರೂ.ಗಳನ್ನು ದಂಡ ವಿಧಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರು. 

ದ.ಕ ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಯವರು ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರವಾನಿಗೆ ಕಡ್ಡಾಯವಾಗಿ ಪಡೆದಿರುವ ಬಗ್ಗೆ ಆಡಿಟ್ ಮಾಡಲು ಇಲಾಖಾಧಿಕಾರಿಗಳಿಗೆ ಸೂಚಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article