ಮುಂದಿನ ಬಾರಿ ಸುಳ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ: ಪಿ.ವಿ. ಮೋಹನ್

ಮುಂದಿನ ಬಾರಿ ಸುಳ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ: ಪಿ.ವಿ. ಮೋಹನ್


ಸುಳ್ಯ: ಸುಳ್ಯದಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಲು ಆದ್ಯತೆ ನೀಡಲಾಗುವುದು. ಗ್ರಾಮಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲುವುದರ ಜೊತೆಗೆ ವಿಧಾನ ಸಭೆ  ಚುನಾವಣೆಯಲ್ಲಿ ಸುಳ್ಯದಿಂದ ಕಾಂಗ್ರೆಸ್ ಶಾಸಕರು ಆಯ್ಕೆಯಾಗುವ ನಿಟ್ಟಿನಲ್ಲಿ ಪಕ್ಷ ಸಂಘಟನೆಯಾಗಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಹೇಳಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ವಿಶೇಷ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ನಗರ ಪಂಚಾಯತ್ ಚುನಾವಣೆಯ ಪೂರ್ವ ತಯಾರಿ ಕುರಿತು ಚರ್ಚಿಸಲಾಯಿತು.

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ, ಭಾರತ್ ಜೋಡೋ ಯುವ ಸಂಘ ರಚನೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕಡಬ ತಾಲೂಕು ಅಧ್ಯಕ್ಷ ಜಿ. ಕೃಷ್ಣಪ್ಪ, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ, ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ.ಸಿ. ಜಯರಾಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಮುಖಂಡರಾದ ಎಸ್.ಸಂಶುದ್ದಿನ್, ಟಿ.ಕೆ. ಸುಧೀರ್, ಶಾಫಿ ಕುತ್ತಮೊಟ್ಟೆ, ಸುರೇಶ್ ಎಂ.ಎಚ್, ದಿನೇಶ್ ಅಂಬೆಕಲ್ಲು, ಇಸ್ಮಾಯಿಲ್ ಪಡ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು.

ಎಂ. ವೆಂಕಪ್ಪ ಗೌಡ, ಮಹೇಶ್ ಕುಮಾರ್ ಕರಿಕ್ಕಳ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಮಹಮ್ಮದ್ ಕುಂಞಿ ಗೂನಡ್ಕ, ಸಿದ್ದಿಕ್ ಕೊಕ್ಕೊ, ಶರೀಪ್ ಕಂಠಿ, ಜುನೈದ್ ಅಡ್ಕಾರ್, ವಿಜಯಕುಮಾರ್, ಮಜೀದ್ ಮತ್ತಿತರರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭವಾನಿಶಂಕರ ಕಲ್ಮಡ್ಕ ವಂದಿಸಿದರು. ದಿನೇಶ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article