ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ 1.10 ಕೋಟಿ ರೂ. ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ
Sunday, October 11, 2026
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ 1 ಕೋಟಿ 10 ಲಕ್ಷ ರೂ. ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗಿದೆ.
ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಉಚಿತ ಡಯಾಲಿಸಿಸ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್.ಡಿ.ಎಂ. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ.) ಜನಾರ್ದನ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.