ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೆ ವರ್ಧಂತ್ಯುತ್ಸವ
ಹೆಗ್ಗಡೆಯವರ ಸೇವೆ-ಸಾಧನೆ ವಿಶ್ವಮಾನ್ಯವಾಗಿದೆ: ಸಿ.ಇ.ಒ. ರಾಘವೇಂದ್ರ ಶ್ರೀನಿವಾಸ ಭಟ್
ಸಂಸೆ ಹೊಸನೆಲ ಎಸ್ಟೇಟ್‌ನ ಪ್ರಬಂಧಕ ಶ್ರೀವರ್ಮ ಸೇರಿದಂತೆ 26 ಮಂದಿ ಹಿರಿಯ ನೌಕರರನ್ನು ಹೆಗ್ಗಡೆಯವರು ಸನ್ಮಾನಿಸಿದರು.
ಡಾ. ಪವನ್ ಬರೆದ ‘ಮುಹೂರ್ತ ಪದವೀ’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.
ಹೆಗ್ಗಡೆಯವರ ಹೊಸ ಯೋಜನೆಗಳು: ಶ್ರವಣಬೆಳಗೊಳದಲ್ಲಿ ವಿದ್ಯಾರ್ಥಿನಿ ನಿಲಯ ನಿರ್ಮಾಣ, ಉಜಿರೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಕ್ರೀಡಾವಸತಿ ನಿಲಯ, ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಮತ್ತು ಫಿಸಿಯೋಥೆರಪಿ ಕಾಲೇಜು ಪ್ರಾರಂಭ, ಶಿಕ್ಷಣ ಸಂಸ್ಥೆಗಳ ಹಳೇಕಟ್ಟಡಗಳ ನವೀಕರಣ, ಉಜಿರೆಯಲ್ಲಿ ಸಿಂಥೆಟಿಕ್ ಟ್ರಾಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಅನುಕೂಲಕ್ಕಾಗಿ ಎ.ಟಿ.ಎಂ. ಬಳಕೆ, ಉಜಿರೆ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ, ಕೆರೆಗಳ ಪುನಶ್ಚೇತನ, ಎಸ್.ಡಿ.ಎಂ. ಆಸ್ಪತ್ರೆ, ಉಜಿರೆಯಲ್ಲಿ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಸೌಲಭ್ಯ ಆರಂಭ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆಯಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು 11.00 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಸೌಲಭ್ಯವನ್ನು ಪ್ರಾರಂಭಿಸಲಾಗುತ್ತದೆ. ಈ ಸೌಲಭ್ಯದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗಲಿದ್ದು ಯೋಜನೆಗಳನ್ನು ಸದ್ಯದಲ್ಲೇ ಅನುಷ್ಠಾನಗೊಳಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಅಲ್ಲದೆ ಭಾನುವಾರ/ಸೋಮವಾರಗಳಲ್ಲಿ ಧರ್ಮಸ್ಥಳಕ್ಕೆ ಬಂದು ಚಿಕಿತ್ಸೆಗಾಗಿ ನೆರವು ಕೋರಿದವರಿಗೆ ಸೂಕ್ತ ಸಹಾಯ ನೀಡಲಾಗುತ್ತದೆ.
ಉಡುಪಿ, ಹಾಸನ ಮತ್ತು ಬೆಂಗಳೂರಿನಲ್ಲಿರುವ ಆಯುರ್ವೇದ ಆಸ್ಪತ್ರೆ ಹಾಗೂ ಧರ್ಮಸ್ಥಳ, ಪರೀಕ ಮತ್ತು ಬೆಂಗಳೂರಿನಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳಲ್ಲಿ ಪಾರಂಪರಿಕ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೆಗ್ಗಡೆಯವರು ತಿಳಿಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಡಿ. ಶ್ರೇಯಸ್ ಕುಮಾರ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೂಡಬಿದ್ರೆ ಇದ್ದರು.
ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಸತೀಶ್ಚಂದ್ರ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀನಾರಾಯಣ ರಾವ್ ವಂದಿಸಿ, ಪದ್ಮಶ್ರೀ ಆರ್. ಜೈನ್ ಮತ್ತು ದಿವ್ಯ ಕಾರ್ಯಕ್ರಮ ನಿರ್ವಹಿಸಿದರು.



