ಉಜಿರೆ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್‌ನಿಂದ ಕಳ್ಮಂಜ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದತ್ತು ಸ್ವೀಕಾರ

ಉಜಿರೆ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್‌ನಿಂದ ಕಳ್ಮಂಜ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದತ್ತು ಸ್ವೀಕಾರ


ಉಜಿರೆ: ಉಜಿರೆಯ ಶ್ರೀ ಧ.ಮಂ. (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ‘ವ್ಯಸನ ಮುಕ್ತ ಹಾಗೂ ಕ್ಷಯ ಮುಕ್ತ ಯುವಜನತೆ’ ಎಂಬ ಆಶಯದೊಂದಿಗೆ ಕಲ್ಮಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವನ್ನು ಅ.2 ರಂದು ಕಲ್ಮಂಜ ಶಾಲೆಯಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ವಿನೋದ್ ಕುಮಾರ್ ಕೆ. ಮಾತನಾಡಿ, ಇಂತಹ ಉತ್ತಮ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಆಯೋಜಿಸಿರುವುದು ಸಂತೋಷದ ವಿಚಾರ. ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಅವರು ಆರೋಗ್ಯವಂತರಾಗಿ, ಉತ್ತಮ ಚಿಂತನೆಗಳೊಂದಿಗೆ ಬೆಳೆಯಬೇಕು. ವ್ಯಸನಗಳಿಂದ ದೂರವಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಮ್ಮ ಶಾಲೆಯನ್ನು ದತ್ತು ಸ್ವೀಕರಿಸಿರುವ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೆ ಶಾಲೆಯ ಪರವಾಗಿ ಹೃತ್ಪೂರ್ವಕಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಮಾತನಾಡಿ, ಶಾಲೆಯನ್ನು ದತ್ತು ಸ್ವೀಕರಿಸುವುದು ಕೇವಲ ಒಂದು ಕಾರ್ಯಕ್ರಮವಲ್ಲ, ಅದು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುವ ಒಂದು ಉತ್ತಮ ಪ್ರಯತ್ನವಾಗಿದೆ. ಎನ್‌ಎಸ್‌ಎಸ್ ಸ್ವಯಂಸೇವಕರು ಶಾಲೆಯೊಂದಿಗೆ ಕೈಜೋಡಿಸಿರುವುದು ಸಂತಸದ ಸಂಗತಿ.ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆಯಾಗಲಿ ಹಾಗೂ ಶಾಲೆಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ನೀಡಲಿ  ಎಂದರು.

ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಮಾಲಿನಿ ಅಂಚನ್ ಮಾತನಾಡಿ, ಎನ್‌ಎಸ್‌ಎಸ್ ಘಟಕದ ವಿವಿಧ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ಶಾಲೆಯನ್ನು ದತ್ತು ಸ್ವೀಕರಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಲ್ಮಂಜದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶೀಲಾವತಿ ಕೆ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮಂಜುನಾಥ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ಚಿದಾನಂದ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಮಾಲಿನಿ ಅಂಚನ್ ಮತ್ತು ಡಾ. ಸುಧೀರ್ ಕೆ.ವಿ., ಶಾಲಾ ಶಿಕ್ಷಕವೃಂದ, ಮಕ್ಕಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

ಹೇಮಲತಾ ಸ್ವಾಗತಿಸಿ, ಸ್ವಯಂ ಸೇವಕಿ ಹರ್ಷಿತ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article