ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಳ್ಮಂಜ ಗ್ರಾಮ ದತ್ತು ಸ್ವೀಕಾರ
Wednesday, October 7, 2026
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (ಸ್ವಾಯತ್ತ), ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಲ್ಮಂಜ ಗ್ರಾಮವನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವನ್ನು ಕಲ್ಮಂಜ ಗ್ರಾಮ ಪಂಚಾಯಿತಿಯಲ್ಲಿ ಅ.2 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಕಲ್ಮಂಜ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿಗಳು, ನಾಯಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.