ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಮಹೋತ್ಸವ ಸಂಭ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಮಹೋತ್ಸವ ಸಂಭ್ರಮ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅ.11ರಿಂದ ಪ್ರತಿ ರಾತ್ರಿ ವಿಶೇಷ ಪೂಜೆ ನಡೆದು ಉತ್ಸವದಲ್ಲಿ ವಸಂತ ಮಂಟಪದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ, ಅಷ್ಟಾವಧಾನ ಸೇವೆ, ಕನ್ನಿಕಾ ಪೂಜೆ ನಡೆಯುತ್ತಿದೆ. 

ಅ.17 ರಂದು ಶ್ರೀ ದೇವರ ಸನ್ನಿಧಿಯಲ್ಲಿ ಚಂಡಿಕಾ ಹವನ ನಡೆಯಲಿದೆ. ಅ.19 ರವರೆಗೆ ಪ್ರತಿ ಸಂಜೆ 6 ರಿಂದ 8 ರವರೆಗೆ ನಾಡಿನ ಪ್ರಸಿದ್ಧ ಕಲಾವಿದರಿಂದ ಪ್ರವಚನ ಮಂಟಪದಲ್ಲಿ ಭಕ್ತಿ ಸಂಗೀತ, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಶರನ್ನವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಅಸಂಖ್ಯಾತ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆಯುತ್ತಿದ್ದಾರೆ. ಧಾರ್ಮಿಕ ದೇವಾಲಯಗಳಲ್ಲಿ ಜನದಟ್ಟಣೆ ಅಧಿಕವಾಗಿದೆ.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪ್ರಯುಕ್ತ ಆ.11 ರಿಂದ 19 ರವರೆಗೆ ಪ್ರತಿ ರಾತ್ರಿ ವಿಶೇಷ ಪೂಜೆ ನಡೆಯುತ್ತಿದೆ. ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪ್ರಯುಕ್ತ ನಿತ್ಯ ರಾತ್ರಿ ವಿಶೇಷ ಪೂಜೆ ನಡೆಯುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article