ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಹೆಗ್ಗಡೆ ಭೇಟಿ

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಹೆಗ್ಗಡೆ ಭೇಟಿ


ಉಜಿರೆ: ಬೆಳ್ತಂಗಡಿಯ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಅವರು ಮಂಗಳವಾರ ಭೇಟಿ ನೀಡಿ, ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಸಂಸ್ಥೆಯಲ್ಲಿ ಕಂಡುಬಂದ ಉತ್ಸಾಹ ಮತ್ತು ಕಾರ್ಯವೈಖರಿ ಸಂತಸ ತಂದಿದೆ. ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಿರಿಧಾನ್ಯಗಳಿಗೆ ಪ್ರಸ್ತುತ ಉತ್ತಮ ಬೇಡಿಕೆಯಿದ್ದು, ಈ ಕ್ಷೇತ್ರದಲ್ಲಿ ಹೊಸ ಹೊಸ ರೀತಿಯ ಅವಕಾಶಗಳೂ ಇವೆ. ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಸಂಸ್ಥೆಯ ಬೆಳವಣಿಗೆಗೆ ಇನ್ನಷ್ಟು ವೇಗ ನೀಡಬಹುದು. ಶ್ರಮವಹಿಸಿ ಶ್ರದ್ಧೆಯಿಂದ ಕೆಲಸ ನಿರ್ವಹಿಸಿದರೆ  ಸಂಸ್ಥೆ ಇನ್ನಷ್ಟು ದೊಡ್ಡದಾಗಿ ಬೆಳೆಯುತ್ತದೆ. ಶ್ರಮ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿದರೆ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯವಿದೆ. ಸಿರಿ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಆಶಿಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಕೆ.ಎನ್. ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿ, ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರೂಪಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಸ್ಥೆಯ ಸಿಬಂದಿಗಳಿಗೆ ಉಡುಗೊರೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬಂದಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article