ಅ.11 ರಂದು ಸ್ವದೇಶಿ ಉತ್ಪನ್ನಗಳ ಮೇಳ

ಅ.11 ರಂದು ಸ್ವದೇಶಿ ಉತ್ಪನ್ನಗಳ ಮೇಳ


ಉಳ್ಳಾಲ: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಿಂದ ಆರಂಭಗೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಮಂಗಳೂರು ಮಂಡಲದ ಒಬಿಸಿ ಮೋರ್ಚಾದ ವತಿಯಿಂದ ಅಕ್ಟೋಬರ್ 11ರಂದು ಅಸೈಗೋಳಿಯ ಖಾಸಗಿ ಭವನದಲ್ಲಿ ಸ್ವದೇಶಿ ಉತ್ಪನ್ನಗಳ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ತಿಳಿಸಿದರು.

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಮೇಳದಲ್ಲಿ 35ರಿಂದ 40 ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ, ಆರೋಗ್ಯ ಜಾಗೃತಿ, ಸ್ಪರ್ಧೆಗಳು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಜನರಿಗೆ ತಲುಪಿಸುವುದು, ಸ್ವದೇಶಿ ಉತ್ಪನ್ನಗಳ ಬಳಕೆಗೆ ಪ್ರೋತ್ಸಾಹ ನೀಡುವುದು ಹಾಗೂ ಸ್ಥಳೀಯ ಉದ್ಯಮಿಗಳು ಮತ್ತು ಸ್ವಯಂ ಉದ್ಯೋಗಿಗಳಿಗೆ ಉತ್ತೇಜನ ನೀಡುವುದು ಈ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ. 

ಅ.11 ರಂದು ಬೆಳಗ್ಗೆ 9ರಿಂದ ರಾತ್ರಿ 10.30ರವರೆಗೆ ಮೇಳ ನಡೆಯಲಿದ್ದು, ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ ಎಂದರು.

ಒಬಿಸಿ ಮೋರ್ಚಾದ ಪ್ರಭಾರಿ ಸುಮಲತಾ ಕೊಣಾಜೆ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕಾಪಿಕಾಡ್ ಹಾಗೂ ಶೇಖರ್ ಕನೀರು ತೋಟ, ಪದಾಧಿಕಾರಿ ಶವಿತ್ ಉಚ್ಚಿಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article