ಕೊಡಂಗೆ 4ನೇ ವರ್ಷದ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ತಾಲೂಕಿನ ಸಿದ್ಧಕಟ್ಟೆ ಸಮೀಪದ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ವತಿಯಿಂದ ಶನಿವಾರ ಆರಂಭಗೊಂಡ ೪ನೇ ವರ್ಷದ ‘ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಉದ್ಘಾಟನಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿದ್ಧಕಟ್ಟೆ ವೈದ್ಯ ಡಾ. ಸುದೀಪ್ ಕುಮಾರ್ ಜೈನ್ ಕಂಬಳ ಕರೆ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ವೈದ್ಯ ಡಾ. ಕೃಷ್ಣಮೂರ್ತಿ ಭಟ್ ಕಂಬಳ ಧ್ವಜಾರೋಹಣ ನೆರವೇರಿಸಿದರು. ಹಿರಿಯ ವೈದ್ಯ ಡಾ. ಪ್ರಭಾಚಂದ್ರ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ, ಸಿದ್ದಕಟ್ಟೆ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪಿಡಿಒ ಗಣೇಶ ಶೆಟ್ಟಿ ಶುಭ ಹಾರೈಸಿದರು.
ಬಂಟ್ವಾಳ ತಹಸೀಲ್ದಾರ್ ಜಿ. ಮಂಜುನಾಥ್, ಸಿದ್ದಕಟ್ಟೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಮೈಕಲ್ ಡಿಕೋಸ್ತ, ರೋಟರಿ ಕ್ಲಬ್ ಮಾಜಿ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್, ಕಂಬಳ ಸಮಿತಿ ಪದಾಧಿಕಾರಿಗಳಾದ ಕಿರಣ್ ಕುಮಾರ್ ಮಂಜಿಲ, ಶಶಿಧರ್ ಶೆಟ್ಟಿ ಕಲ್ಲಾಪು, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಮಧುಸೂದನ್ ಸಾಲ್ಯಾನ್ ಕಲಾಯಿದಡ್ಡ, ಉಮೇಶ್ ಶೆಟ್ಟಿ ಕೊನೆರೊಟ್ಟು, ಸಂದೇಶ್ ಶೆಟ್ಟಿ ಪೊಡುಂಬ, ನವೀನ್ ಹೆಗ್ಡೆ ಮಣಿಪಾಲ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಚಂದ್ರಶೇಖರ ಪೂಜಾರಿ ಕೊಡಂಗೆ, ಜನಾರ್ದನ ಬಂಗೇರ ತಿಮರಡ್ಕ, ಉಮೇಶ್ ಹಿಂಗಾಣಿ, ಅವನ್ ಕುಮಾರ್ ಜೈನ್ ಪಣೆಬೆಟ್ಟು, ವಸಂತಶೆಟ್ಟಿ ಕೇದಗೆ ಸ್ಥಳದಾನಿ ಓಬಯ್ಯ ಪೂಜಾರಿ ಕೊಡಂಗೆ, ಲಲಿತಾ ಕೊರಗಪ್ಪ ಪೂಜಾರಿ ಮತ್ತಿತರರು ಭಾಗವಹಿಸಿದ್ದರು.
ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಸ್ವಾಗತಿಸಿ, ಪ್ರಸ್ತಾವನೆಗೈದರು. ಗೌರವ ಸಲಹೆಗಾರ, ವಕೀಲರಾದ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಮತ್ತು ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಕಾರ್ಯಕ್ರಮ ನಿರೂಪಿಸಿದರು.