ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು: ನ್ಯಾಯಾಲಯಕ್ಕೆ ಶರಣಾದ ಆರೋಪಿ
Friday, November 13, 2026
ಬಂಟ್ವಾಳ: ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಗೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಎರಡು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ನ್ಯಾಯಾಲಯಕ್ಕೆ ಶರಣಾದವನನ್ನು ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಬಾ (21) ಎಂದು ಗುರುತಿಸಲಾಗಿದೆ.
ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಅವರು ಫೆ.4 ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 17/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.