ಬಣ್ಣ ಬಳಿಯುತ್ತಿದ್ದ ಕಾರ್ಮಿಕ ಆಯತಪ್ಪಿ ಬಿದ್ದು ಮೃತ್ಯು

ಬಣ್ಣ ಬಳಿಯುತ್ತಿದ್ದ ಕಾರ್ಮಿಕ ಆಯತಪ್ಪಿ ಬಿದ್ದು ಮೃತ್ಯು

ಬಂಟ್ವಾಳ: ಕಟ್ಟಡದ ಗೋಡೆಗೆ ಬಣ್ಣ ಬಳಿಯುವ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರೋರ್ವರು ಆಕಸ್ಮಿಕವಾಗಿ ಆಯತಪ್ಪಿ ಮೇಲಿನಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿ ನಡೆದಿದೆ.

ಮೃತರನ್ನು ಮೂಲತ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಇನಾಂ ಕಡಿವಾಳ ಗ್ರಾಮದ ನಿವಾಸಿ, ಪ್ರಸ್ತುತ ಮಂಗಳೂರಿನ ಪಡೀಲ್ ಮೇಘಾ ನಗರದ ೪ನೇ ಕ್ರಾಸ್‌ನಲ್ಲಿ ವಾಸ್ತವ್ಯವಿರುವ ಕೂಡ್ಲಪ್ಪ ಹಡಪದ (56) ಎಂದು ಗುರುತಿಸಲಾಗಿದೆ.

ಆಯತಪ್ಪಿ ಬಿದ್ದಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲುದ್ದ ಅವರು ಸಂಜೆಯ ವೇಳೆಗೆ ಅವರು ಕೊನೆಯುಸಿರೆಳೆದಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article