ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Saturday, November 7, 2026
ಬಂಟ್ವಾಳ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕುಂಪನಮಜಲು ನಿವಾಸಿ ಮೊಹಮ್ಮದ್ ಶರೀಫ್ (43) ಬಂಧಿತ ಆರೋಪಿಯಾಗಿದ್ದಾನೆ. 2015ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿದ್ದ
ಶುಕ್ರವಾರ ವಿದೇಶದಿಂದ ಈತ ಅಗಮಿಸುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.