ಮಾದಕ ವಸ್ತು ಸೇವನೆ: ಓರ್ವನ ಬಂಧನ
Saturday, November 21, 2026
ಬಂಟ್ವಾಳ: ಕರಿಯಂಗಳ ಗ್ರಾಮದ ಪುಂಚಮೆ ಕಿನ್ನಿಗುಡ್ಡೆ ಬಸ್ಸು ನಿಲ್ದಾಣದ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕರಿಯಂಗಳ ಗ್ರಾಮದ ಪುಂಚಮೆ ಸಮೀಪದ ಕಿನ್ನಿಗುಡ್ಡೆ ನಿವಾಸಿ ಹಮ್ಮಿದ್ ಎಂಬವರ ಪುತ್ರ ಮಹಮ್ಮದ್ ಜುನಾಬ್ (24) ಎಂದು ಬಂಧಿತನಾಗಿದ್ದಾನೆ.
ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಕಿನ್ನಿಗುಡ್ಡೆ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸಿದ ವ್ಯಕ್ತಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ವರ್ತಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಳಿಕ ಅತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.