ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕ

ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕ


ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ಶ್ರೀರಾಮನಗರದ ಕೇಶವ ಹಾಗೂ ವಿಮಲ ದಂಪತಿಗಳ ಪುತ್ರಿ ದಿಶಾ ಅವರು ಮಂಗಳೂರಿನ ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಅಧೀನದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಬಿ.ಎಸ್ಸಿ. ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸುವುದರೊಂದಿಗೆ ಚಿನ್ನದ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. 

ವಿದ್ಯಾರ್ಥಿನಿಯ ಈ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ನಿಟ್ಟೆ ವಿಶ್ವವಿದ್ಯಾಲಯವು ಅವರಿಗೆ ಪ್ರತಿಭಾ ಪ್ರಮಾಣಪತ್ರ ನೀಡಿ ಗೌರವಿಸಿದೆ.

ದಿಶಾ ಅವರ ಈ ಸಾಧನೆಗೆ ಕುಟುಂಬಸ್ಥರು, ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article