ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿಧಾತರ್ರಿಯ ಮೃತ್ಯು

ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿಧಾತರ್ರಿಯ ಮೃತ್ಯು


ಬಂಟ್ವಾಳ: ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ಎಂಬಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ದೇವಿನಗರ ಲೋರಿಬೆಟ್ಟು ನಿವಾಸಿ, ಸುಚಿನ್ ಎಸ್. (14) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.

ಶನಿವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಪನೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸುಚಿನ್‌ನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಸುಚಿನ್ ಡೊಮಿನಿಕ್ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article