‘ದರ್ಪಣ-2026’ ರಥಬೀದಿ ಕಾಲೇಜಿಗೆ ರನ್ನರ್ ಅಪ್ ಪ್ರಶಸ್ತಿ

‘ದರ್ಪಣ-2026’ ರಥಬೀದಿ ಕಾಲೇಜಿಗೆ ರನ್ನರ್ ಅಪ್ ಪ್ರಶಸ್ತಿ


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನಿಲಯದಲ್ಲಿ ಇಂದು ನಡೆದ ‘ದರ್ಪಣ-2026’ ಕಾರ್ಯಕ್ರಮದಲ್ಲಿ ಸರ್ಕಾರಿ ಕಾಲೇಜುಗಳ ವಿಭಾಗದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು 2025-26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಅತ್ಯುತ್ತಮ ಸಮಗ್ರ ರನ್ನರ್ ಅಪ್ ಕ್ರೀಡಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.


ಮಹಿಳೆಯರ ಹಾಗೂ ಪುರುಷರ ವಿಭಾಗಗಳಲ್ಲಿನ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆಗೈದು, ಒಟ್ಟು 150 ಅಂಕಗಳನ್ನು ಗಳಿಸಿ, ಪ್ರಶಸ್ತಿ ತನ್ನದಾಗಿಸಿಕೊಂಡಿದೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಹಾಗೂ ವಿಭಾಗ ಮುಖ್ಯಸ್ಥೆ ಡಾ. ಅಪರ್ಣಾ ಆಳ್ವ ಅವರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಕುಲಸಚಿವರು ಹಾಗೂ ಡಾ. ಮೋಹನ್ ಆಳ್ವ ಅವರ ಗೌರವ ಉಪಸ್ಥಿತಿಯಲ್ಲಿ ಕಾಲೇಜಿನ ಪರವಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article