ನ.28, 29 ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ

ನ.28, 29 ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ

ಮಂಗಳೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ವತಿಯಿಂದ ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.28 ಮತ್ತು 29ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ, ಕೇರಳ -ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ಹಾಗೂ ಕೇರಳ-ಕರ್ನಾಟಕ ಭವನದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. 

ನ.28ರಂದು ಬೆಳಗ್ಗೆ 9ರಿಂದ ಕೂಡ್ಲು ಶ್ರೀ ಗೋಪಾಲಕೃಷ್ಣ ಹೈಸ್ಕೂಲ್ ಪರಿಸರದಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಗುವುದು. 10.30ಕ್ಕೆ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ, ಕೇರಳ-ಕರ್ನಾಟಕ ಉತ್ಸವವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸುವರು. ಕೇರಳ, ಕರ್ನಾಟಕದ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ಕರ್ನಾಟಕದ ಮಾಜಿ ಸಚಿವ ಜೆ.ಕೃಷ್ಣ ಪಾಲೇಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಅಧ್ಯಕ್ಷ ಶಿವರಾಮ ಕಾಸರಗೋಡು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವೇಳೆ ಕರಕುಶಲ, ವಸ್ತು, ಚಿತ್ರಕಲಾ ಮೇಳ, ಪುಸ್ತಕ ಮೇಳ, ಆಹಾರ ಮೇಳ, ಸಾವಯವ ಕೃಷಿ ಮೇಳದ ಉದ್ಘಾಟನೆ ಹಾಗೂ ಹೊಸ ಕೃತಿಗಳು, ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ. ಕಾಸರಗೋಡು ಗೋ-ಕುಟೀರದ ಪ್ರವೇಶೋತ್ಸದ- ಲೋಕಾರ್ಪಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದಲ್ಲಿ ‘ಕೇರಳ ಕರ್ನಾಟಕ ಭವನ’ದ ಭೂಮಿಪೂಜೆ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಅಂತಾರಾಜ್ಯ ಮಟ್ಟದ ಮಾಧ್ಯಮ ಗೋಷ್ಠಿ, ಅಂತಾರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ, ಅಂತಾರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಹಾಗೂ ಕೇರಳ-ಕರ್ನಾಟಕ ರಾಜ್ಯದ ವಿವಿಧ ಸಂಘ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಅಂತರರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳು ಎರಡು ದಿನಗಳ ಕಾಲ ಪ್ರದರ್ಶನಗೊಳ್ಳಲಿದೆ.

ನ.29ರಂದು 9.30ರಿಂದ 12.30ರ ತನಕ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಮತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ನಡೆಯುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದಲ್ಲಿ ಅಂತಾರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿ, ಅಂತಾರಾಜ್ಯಮಟ್ಟದ ಕಾಲೇಜು ವಿದ್ಯಾರ್ಥಿ ಕವಿಗೋಷ್ಠಿ, ಮಕ್ಕಳ ಸಾಹಿತ್ಯ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರಕಾರದ ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಅಂತಾರಾಜ್ಯಮಟ್ಟದ ಬಹುಭಾಷಾ ಬಾಂಧವ್ಯ ಗೋಷ್ಠಿಯನ್ನು ಏರ್ಪಡಿಸಲಾಗಿದೆ. ಗಡಿನಾಡು-ಹೊರನಾಡು, ಅನಿವಾಸಿ ಭಾರತೀಯ ಕನ್ನಡಿಗರು-ಕನ್ನಡ ಸಂಘಟನೆಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಮಧ್ಯಾಹ್ನ 3ರಿಂದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

ಅನುದಾನ ಇಲ್ಲ..

ಗಡಿನಾಡು ಕನ್ನಡ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುತ್ತೇವೆ ಕರ್ನಾಟಕ ಸರ್ಕಾರ ಹೇಳುತ್ತಿದೆ. ಈ ಬಾರಿಯ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೆವು. ಆದರೆ ಮುಂದಿನ ಬಾರಿ ಮನವಿ ಸಲ್ಲಿಸಿ ಎಂದು ಸರ್ಕಾರದಿಂದ ಅಽಕೃತ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖರಾದ ಎಸ್.ಎಲ್.ಭಾರಧ್ವಾಜ್, ಮಂಜುನಾಥ ರೇವಣ್ಕರ್, ರಮ್ಯಾ ಅರುಣ್, ವೀಣಾ ಪಡಿಯಾರ್, ಸರೋಜಾ ರಾವ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article