ಡಿ.4-6: ಟಿ20 ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್

ಡಿ.4-6: ಟಿ20 ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್

ಮಂಗಳೂರು: ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ವತಿಯಿಂದ 12ನೇ ಕರ್ನಾಟಕ ರಾಜ್ಯ ಕಿವುಡರ ಟಿ20 ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ ಡಿ.4ರಿಂದ 6ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಅಧ್ಯಕ್ಷ ಚರಣ್ ಕುಮಾರ್ ಟಿ.ಸಿ. ತಿಳಿಸಿದರು.

ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿ.4ರಂದು ಬೆಳಗ್ಗೆ 9.30ಕ್ಕೆ ನಗರದ ನೆಹರೂ ಮೈದಾನದಲ್ಲಿ ಪಂದ್ಯಾಟಕ್ಕೆ ಚಾಲನೆ ದೊರೆಯಲಿದೆ. ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ 24 ಜಿಲ್ಲೆಗಳ ತಂಡಗಳು ಭಾಗವಹಿಸಲಿದ್ದು, ನಾಲ್ಕು ಗುಂಪುಗಳಲ್ಲಿ ಪಂದ್ಯಗಳು ನಡೆಯಲಿವೆ. ನೆಹರೂ ಮೈದಾನ, ಬೊಂದೇಲ್ ಮೈದಾನ, ಎ.ಜೆ. ಮೈದಾನ ಹಾಗೂ ಪಾದುವ ಓವರ್ ಹೆಡ್ ನೀರಿನ ಟ್ಯಾಂಕ್ ಸಮೀಪದ ಮೈದಾನದಲ್ಲಿ ಪಂದ್ಯಾಟಗಳು ನಡೆಯಲಿದೆ ಎಂದರು.

ವಿವಿಧ ಜಿಲ್ಲೆಗಳಿಂದ ಆಗಮಿಸುವ ಆಟಗಾರರ ವಸತಿಗಾಗಿ ಕೆಪಿಟಿಸಿಎಲ್ ಎಂಪ್ಲಾಯೀಸ್ ಸಭಾಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಆಟಗಾರರಿಗೆ ಅಗತ್ಯ ಇರುವ ಎಲ್ಲ ಮೂಲಭೂತ ಸವಲತ್ತುಗಳನ್ನು ಆಯೋಜಕರ ಕಡೆಯಿಂದ ನಡೆದಿದೆ. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ 1 ಲಕ್ಷ ರು., ರನ್ನರ್‌ಅಪ್ ತಂಡಕ್ಕೆ 50 ಸಾವಿರ ರು. ಹಾಗೂ ತೃತೀಯ ಸ್ಥಾನ ಪಡೆಯುವ ತಂಡಕ್ಕೆ 25 ಸಾವಿರ ರು. ನಗದು ಬಹುಮಾನ ನೀಡಲಾಗುತ್ತದೆ. ಕಿವುಡ ಕ್ರೀಡಾಪಟುಗಳಿಗೆ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು, ಕ್ರೀಡಾ ಮನೋಭಾವ ಬೆಳೆಸುವುದು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅವರ ಸಾಧನೆಗೆ ಪ್ರೋತ್ಸಾಹ ನೀಡುವುದು ಪಂದ್ಯಾವಳಿಯ ಉದ್ದೇಶವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಮನೋಜ್, ಚೇತನ್‌ಕುಮಾರ್, ರಮೇಶ್, ಯಶವಂತ್, ಆಂಡ್ರೀನ್ ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article