ಶಕ್ತಿ ಪಿಯು ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ಘಟಕ ಉದ್ಘಾಟನೆ
Friday, November 13, 2026
ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪಿಯು ಕಾಲೇಜಿನಲ್ಲಿ ನ.11 ರಂದು ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC)ನ ‘ಆರ್ಮಿ ವಿಂಗ್’ (ಸೇನಾ ವಿಭಾಗ) ಘಟಕವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ 18ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿಯ ಕಮಾಂಡಿಂಗ್ ಆಫೀಸರ್, ಲೆಫ್ಟಿನೆಂಟ್ ಕರ್ನಲ್ ರೋಹಿತ್ ಪ್ರಕಾಶ್ ರೈ ಅವರು ಎನ್‌ಸಿಸಿ ಫಲಕವನ್ನು ಅನಾವರಣಗೊಳಿಸುವ ಮೂಲಕ ಈ ಘಟಕವನ್ನು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ಪ್ರದರ್ಶಿಸಿದ ಶಿಸ್ತನ್ನು ಶ್ಲಾಘಿಸಿದರು ಮತ್ತು ಈ ಶಿಸ್ತಿನ ಮನೋಭಾವವೇ ಎನ್‌ಸಿಸಿ (NCC)ಯ ಅಡಿಪಾಯವಾಗಿದೆ ಎಂದು ಒತ್ತಿ ಹೇಳಿದರು. ಅವರು ಕಾಲೇಜು ಆಡಳಿತ ಮಂಡಳಿಯನ್ನು ಅಭಿನಂದಿಸಿದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ಕೆಡೆಟ್‌ಗಳಿಗೆ, ಎನ್‌ಸಿಸಿಯ ಧ್ಯೇಯವಾಕ್ಯವಾದ ‘ಏಕತೆ ಮತ್ತು ಶಿಸ್ತು’ (Unity and Discipline) ಅನ್ನು ಎತ್ತಿಹಿಡಿಯುವಂತೆ ಪ್ರೇರೇಪಿಸಿದರು.
ಶಕ್ತಿ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸಂಜಿತ್ ನಾಕ್ ಮಾತನಾಡಿ, ಶುಭಾಶಯಗಳನ್ನು ಕೋರುವುದರ ಜೊತೆಗೆ, ರಾಷ್ಟ್ರೀಯ ಭಾವೈಕ್ಯತೆ, ಸಾಮಾಜಿಕ ಜವಾಬ್ದಾರಿ ಮತ್ತು ನಿಸ್ವಾರ್ಥ ಸೇವೆಯನ್ನು ಉತ್ತೇಜಿಸಲು ಈ ವೇದಿಕೆಯನ್ನು ಬಳಸಿಕೊಳ್ಳುವಂತೆ ಕೆಡೆಟ್‌ಗಳಿಗೆ ಕರೆ ನೀಡಿದರು.
ಶಕ್ತಿ ಎಜುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ಕೆ.ಸಿ. ನಾಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿಯ ಪಿಐ (PI) ಸಿಬ್ಬಂದಿ, ನಾಯಬ್ ಸುಬೇದಾರ್ ಎನ್.ಬಿ. ಪಾಟೀಲ್, ಮುಖ್ಯ ಸಲಹೆಗಾರ ರಮೇಶ್ ಕೆ., ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಡಾ. ಸುರೇಖಾ ಭಟ್ ಹಾಗೂ ಕೇರ್‌ಟೇಕರ್ ಆಫೀಸರ್ (CTO) ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಸಿಟಿಒ (CTO) ಸೂರ್ಯನಾರಾಯಣ ಭಟ್ ಅವರು ಕೆಡೆಟ್‌ಗಳಿಗೆ ಎನ್‌ಸಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ನಂತರ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC)ನ ‘ಆರ್ಮಿ ವಿಂಗ್’ (ಸೇನಾ ವಿಭಾಗ) ಕಛೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಅತಿಥಿಗಳು ಉದ್ಘಾಟಿಸಿದರು.
ಉಪನ್ಯಾಸಕಿ ಅಶ್ವಿನಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಸೂರ್ಯನಾರಾಯಣ ಭಟ್ ಅವರು ಸ್ವಾಗತಿಸಿದರು.










