ಮುಚ್ಚೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ–ಪ್ರತಿಭಟನಾ ಸಭೆಯಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗಿ

ಮುಚ್ಚೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ–ಪ್ರತಿಭಟನಾ ಸಭೆಯಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗಿ


ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಮುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ, ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ ಘೋಷವಾಕ್ಯದೊಂದಿಗೆ ಇಂದು ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ, ಜನರ ಸಮಸ್ಯೆಗಳು ಹಾಗೂ ಹಕ್ಕುಗಳ ಪರವಾಗಿ ಧ್ವನಿಯೆತ್ತಿದರು.

ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಿದರು. ಜನರ ಹಕ್ಕುಗಳನ್ನು ಪಡೆಯುವವರೆಗೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ದೃಢ ಸಂಕಲ್ಪದೊಂದಿಗೆ ಪ್ರತಿಭಟನಾ ಸಭೆ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article