ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ: ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ: ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು: ದ್ವಿಚಕ್ರವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪಣಂಬೂರು ಬಳಿ ಸೋಮವಾರ ಬೆಳಗ್ಗೆ 7.45 ರ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ಪಾಂಡೇಶ್ವರದ ಅಲೂಫ್ ಅಹ್ಮದ್ (18) ಸ್ಥಳದಲ್ಲೇ ಮೃತಪಟ್ಟವರಾಗಿದ್ದಾರೆ. ಅವರ ಸ್ನೇಹಿತ ಮುಹಮ್ಮದ್ ಅಮೀರ್ (19) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನದಲ್ಲಿ ಸರ್ವಿಸ್ ರಸ್ತೆಯಾಗಿ ಬಂದ ಯುವಕರು ಪಣಂಬೂರು ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಪ್ರವೇಶಿಸುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಯುವಕರಿಬ್ಬರೂ ಹೆದ್ದಾರಿಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಅಲೂಫ್ ಅಹ್ಮದ್ ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ಸನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article