ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ನೆಹರೂ ಮೈದಾನದಲ್ಲಿ ಭಾನವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಂದ ಎಸ್ಸಿಡಿಸಿಸಿ ಬ್ಯಾಂಕಿನ ನಿರೀಕ್ಷಕರಾದ ಎಸ್. ಜಗದೀಶ್ಚಂದ್ರ ಅಂಚನ್ ಅವರು ಸಂಘದ ಅಧ್ಯಕ್ಷ ನೆಲೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಅವರ ಉತ್ತಮ ನಾಯಕತ್ವದಲ್ಲಿ, ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದ ಅವಿರತ ಪರಿಶ್ರಮದಿಂದ ಸಂಘವು ನಿರಂತರ ಲಾಭದೊಂದಿಗೆ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಹಕಾರಿ ನೌಕರರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಸಂಘವು ತನ್ನ ಸದಸ್ಯರಿಗೆ ಗುಣಮಟ್ಟದ ಸೇವೆ ಒದಗಿಸುವ ಮೂಲಕ ವಿಶ್ವಾಸಾರ್ಹ ಸಂಸ್ಥೆಯಾಗಿ ಬೆಳೆದಿದೆ.
ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಸಂಘದ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ಚಂದ್ರಕಲಾ ಕೆ., ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.