ಚರ್ಚ್ ಧರ್ಮಗುರು ವಿರುದ್ಧ ಮತ್ತೊಂದು ಪೋಕ್ಸೊ ಪ್ರಕರಣ ದಾಖಲು

ಚರ್ಚ್ ಧರ್ಮಗುರು ವಿರುದ್ಧ ಮತ್ತೊಂದು ಪೋಕ್ಸೊ ಪ್ರಕರಣ ದಾಖಲು

ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ವೆಲೆನ್ಸಿಯಾದಲ್ಲಿರುವ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭನುವಾರ ಪ್ರಾರ್ಥನೆಗೆ ತೆರಳುತ್ತಿದ್ದ ಅಪ್ರಾಪ್ತ 13 ವರ್ಷ ಬಾಲಕನ ಮೇಲೆ ೬೫ರ ಹರೆಯದ ಫಾ: ಸಿಪ್ರಿಯನ್ ಪಿಂಟೋ 2026ರ ಮೇ 13ರಂದು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಅ.15ರಂದು 14 ವರ್ಷ ಪ್ರಾಯದ ಬಾಲಕ ನೀಡಿದ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಅ.18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅ.30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಮುಂದಿನ ತನಿಖೆಯ ಬಗ್ಗೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article