ಜಿಎಂಪಿಎಲ್ ಕಾರ್ಖಾನೆ ಮಾಲಿನ್ಯ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ
ಆರೋಗ್ಯದ ಬಗ್ಗೆ ತೀವ್ರ ಆತಂಕ..
ಸೋಮವಾರ ರಾತ್ರಿ ಧೂಮಾವತಿ ದಾಮ ಮತ್ತು ಸುತ್ತಮುತ್ತಲಿನ ವಸತಿ ಪ್ರದೇಶಗಳಲ್ಲಿನ ಮನೆಗಳು, ಅಂಗಳಗಳು ಹಾಗೂ ಕುಡಿಯುವ ನೀರಿನ ಬಾವಿಗಳ ಮೇಲೆ ಪುಡಿಯಂತಹ ಅನುಮಾನಾಸ್ಪದ ಪದಾರ್ಥಗಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದರು. ಜಿಎಂಪಿಎಲ್ ಘಟಕದಿಂದಲೇ ಈ Pಮಾಲಿನ್ಯ ಬಿಡುಗಡೆಯಾಗಿದೆ ಎಂದು ಆರೋಪಿಸಿರುವ ನಿವಾಸಿಗಳು, ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ತೀವ್ರಗೊಂಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರತಿಭಟನಾಕಾರರನ್ನು ಗೇಟ್‌ನಿಂದ ಕರೆದೊಯ್ದರು.
ನಿರಂತರ ಪರಿಸರ ಸಮಸ್ಯೆಗಳ ಆರೋಪ..
ಶುದ್ಧೀಕೃತ ಟೆರೆಫ್ಥಾಲಿಕ್ ಆಮ್ಲವನ್ನು ಉತ್ಪಾದಿಸುವ ಜಿಎಂಪಿಎಲ್ ಘಟಕವು ಕಳೆದ ಹಲವಾರು ತಿಂಗಳುಗಳಿಂದ ಪರಿಸರಕ್ಕೆ ತೊಂದರೆಂಟು ಮಾಡುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಆಡಳಿತಕ್ಕೆ ಹಲವು ಬಾರಿ ದೂರು ನೀಡಿದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಮುಖ ಬೇಡಿಕೆಗಳು..
ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷರು ಮತ್ತು ಕೌನ್ಸಿಲರ್‌ಗಳು, ಸ್ಥಳೀಯ ಪ್ರತಿಭಟನಾ ಸಮಿತಿಯ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲಿನ ನಿವಾಸಿಗಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಈ ವೇಳೆ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಯಿತು.
ವೈಜ್ಞಾನಿಕ ಪರೀಕ್ಷೆ: ಛಾವಣಿಗಳು, ಅಂಗಳಗಳು ಹಾಗೂ ಬಾವಿಗಳಿಂದ ಮಾದರಿಗಳನ್ನು ಸಂಗ್ರಹಿಸಿ, ಅವುಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಓಂಃಐ-ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸುವುದು.
ಜಂಟಿ ತನಿಖೆ..
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಜಿಲ್ಲಾ ಆಡಳಿತದಿಂದ ಜಂಟಿ ತನಿಖೆ ನಡೆಸಿ ಕಾರ್ಖಾನೆಯ ಹೊಗೆ, ಶಬ್ಧ ಹಾಗೂ ತ್ಯಾಜ್ಯನೀರಿನ ವಿಸರ್ಜನೆಯನ್ನು ಪರಿಶೀಲಿಸಬೇಕು. ಫಲ್ಗುಣಿ ನದಿಯ ನೀರಿನ ಗುಣಮಟ್ಟದ ಕುರಿತು ಸ್ವತಂತ್ರ ಮೌಲ್ಯಮಾಪನ ಮತ್ತು ಘಟಕದ ಚಟುವಟಿಕೆಗಳ ತಾಂತ್ರಿಕ ತನಿಖೆ ನಡೆಸಬೇಕು. ಕಾನೂನು ಕ್ರಮ: ನಿಯಮ ಉಲ್ಲಂಘನೆಗಳು ಸಾಬೀತಾದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವುದು ಮತ್ತು ಮುಂದಿನ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು. ಲ್ಲಾ ಆಡಳಿತ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.