ಸರಣಿ ರಸ್ತೆ ಅಪಘಾತ ಇಬ್ಬರು ದ್ವಿಚಕ್ರ ವಾಹನ ಸವಾರರು ಬಲಿ

ಸರಣಿ ರಸ್ತೆ ಅಪಘಾತ ಇಬ್ಬರು ದ್ವಿಚಕ್ರ ವಾಹನ ಸವಾರರು ಬಲಿ

ಮಂಗಳೂರು: ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ನಾವೂರು ನಿವಾಸಿ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ಟೆಂಪೋ, ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಗೂಡ್ಸ್ ಟೆಂಪೋ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸಂತೋಷ್ ಅಪಘಾತದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article