ಸಲೀಂ ಅಹ್ಮದ್‌ಗೆ ಸಭಾಪತಿಯಾಗಿ ಅರ್ಹವಾದ ಸ್ಥಾನ ದೊರಕಿದೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ
ಸಾರ್ವಜನಿಕ ಸನ್ಮಾನ
ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ಸಾರ್ವಜನಿಕ ಸನ್ಮಾನ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ರವರಿಗೆ ನಡೆದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಫಾ. ಫ್ರಾನ್ಸಿಸ್ ಝೇವಿಯರ್ ಗೋಮ್ಸ್ ಆಶೀರ್ವಚನ ನೀಡಿ, ಸೇವಾ ಮನೋಭಾವ ಹಾಗೂ ಶಿಸ್ತಿನಿಂದ ರಾಜಕಾರಣ ನಡೆಸಿರುವ ಸಲೀಂ ಅಹ್ಮದ್ರವರು ಉತ್ತಮ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದಾರೆ. ಅವರಿಂದ ರಾಜ್ಯಕ್ಕೆ ಇನ್ನಷ್ಟು ಸೇವೆ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.
ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಅಭಿನಂದನಾ ಭಾಷಣ ಮಾಡಿರಲ್ಲದೆ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚನೆಯಾಗಿದ್ದು, ಈ ಬಗ್ಗೆ ಸರಕಾರಕ್ಕೆ ಪೂರಕವಾಗಿ ಸಲಹೆ ಹಾಗೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯದ ಆರೋಗ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್, ಸಲೀಂ ಅಹ್ಮದ್ ಜತೆಗಿನ ತಮ್ಮ ಬಾಂಧವ್ಯವನ್ನು ನೆನಪಿಸಿಕೊಂಡರು.
ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಮಾತನಾಡಿ, ಸಲೀಂ ಅಹ್ಮದ್ ಅವರನ್ನು ಅಭಿನಂದಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯ ಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ ಮೋನು, ಕಣಚೂರು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ಥಾಪಕಾಧ್ಯಕ್ಷ ಡಾ. ಯು.ಕೆ. ಮೋನು, ಕರ್ನಾಟ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಳ್ಳಾಲ್, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇನಾಯತ್ ಅಲಿ, ಎಂ.ಎಸ್. ಮುಹಮಮದ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ, ಕಡಬ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜಾ, ಭರ್ ಮುಂಡೋಡಿ, ದ.ಕ.ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಟಿ. ಕೆ. ಸುಧೀರ್ ಉಪಸ್ಥಿತರಿದ್ದರು.
ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಶಶಿಧರ ಹೆಗ್ಡೆ ವಂದಿಸಿದರು.
ಅನುಭವ ಮಂಟಪ ರಾಜಕೀಯ ಸ್ಫೂರ್ತಿ..
ಬಸವಣ್ಣನವವರ ಅನುಭವ ಮಂಟಪವೇ ನನಗೆ ರಾಜಕೀಯ ಸ್ಫೂರ್ತಿಯಾಗಿದ್ದು, ಸಂವಿಧಾನಕ್ಕೆ ಪೂರಕವಾಗಿ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹೇಳಿದರು.
ಹೆಮ್ಮೆಯ ನಕ್ಷತ್ರಗಳು..
ರಾಜಕೀಯಲ್ಲಿ ಸಮರ್ಪಣಾ ಮನೋಭಾವ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯವಾಗಿದ್ದು, ದ.ಕ. ಜಿಲ್ಲೆಯ ಪಾಲಿಗೆ ಸಲೀಂ ಅಹ್ಮದ್ ಹಾಗೂ ಯು.ಟಿ.ಖಾದರ್ ಅವರು ಹೆಮ್ಮೆಯ ನಕ್ಷತ್ರಗಳು ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಲಿ ಎಂದರು.