ನೂತನ ಶಾಖಾ ಗಂಥಾಲಯ ಕಟ್ಟಡದ ಉದ್ಘಾಟನೆ
ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ,ಈ ಗಂಥಾಲಯದ ಕಟ್ಟಡಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾತಿ ದೊರೆತು ಅದೇ ಅವಧಿಯಲ್ಲಿ ಭೂಮಿಪೂಜೆ ಸಹ ನೆರವೇರಿಸಲಾಗಿತ್ತು. ಅಲ್ಲದೇ ಶಾಸಕರ ಎಸ್.ಎಫ್.ಸಿ ವಿಶೇಷ ಅನುದಾನದಿಂದ ರೂ. 12.00 ಲಕ್ಷ ಒದಗಿಸಿ ಕೊಡಲಾಗಿತ್ತು. ಇದೀಗ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡು ಉದ್ಘಾಟನೆಯಾಗಿದ್ದು ಓದುಗರಿಗೆ ಬಳಕೆಗೆ ಸಿದ್ದವಾಗಿದೆ. ಗ್ರಂಥಾಲಯವೆಂಬುದು ಕೇವಲ ಪುಸ್ತಕಗಳ ಸಂಗ್ರಹವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ವ್ಯಕ್ತಿತ್ವ ವಿಕಸನದ ಅಮೂಲ್ಯ ಕೇಂದ್ರವಾಗಿದೆ. ಪ್ರಸ್ತುತ ಆಡಳಿತದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಯಾವುದೇ ವಿಶೇಷ ಅನುದಾನಗಳು ಬರದಿರುವುದರಿಂದ ಇಂತಹ ಅಮೂಲ್ಯ ಗ್ರಂಥಾಲಯಗಳ ಮುಂದಿನ ಅಭಿವೃದ್ಧಿಗೆ ತಡೆಯಾಗುತ್ತಿರುವುದು ಬೇಸರದ ಸಂಗತಿ. ಆದರೂ ಓದುಗರ ಹಿತದೃಷ್ಟಿಯಿಂದ ಸರ್ಕಾರದ ಮಟ್ಟದಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಜೊತೆಗೆ ಪುಸ್ತಕ ಓದುವ ಹವ್ಯಾಸವನ್ನೂ ಬೆಳೆಸಿಕೊಳ್ಳಬೇಕು. ಈ ಗ್ರಂಥಾಲಯವು ಮುಂದಿನ ಪೀಳಿಗೆಯ ಜ್ಞಾನಾರ್ಜನೆಗೆ ಮತ್ತು ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆಯ ಕೇಂದ್ರವಾಗಲಿ ಎಂದು ಶುಭ ಕೋರಿದರು.
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ನಿಕಟ ಪೂರ್ವ ಮನಪಾ ಸದಸ್ಯರುಗಳಾದ ವನಿತಾ ಪ್ರಸಾದ್, ಶಕೀಲಾ ಕಾವ, ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ರಾಘವೇಂದ್ರ ಕೆ.ವಿ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.