BREAKING
ದಕ್ಷಿಣ ಕನ್ನಡ

ಬಿಜೆಪಿಯಿಂದ ಸಂವಿಧಾನ ದಿನಾಚರಣೆ


ಮಂಗಳೂರು: ನ.26 ರಂದು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಬಳಿಯಿರುವ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಜಗನ್ನಾಥ್ ಬೆಳುವಾಯಿ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷೆ ಸುಮಿತ್ರಾ ಕರಿಯ, ಮಾಜಿ ಮೇಯರ್ ಮನೋಜ್ ಕುಮಾರ್, ಪ್ರಮುಖರಾದ ಉಮೇಶ್ ಕೋಟ್ಯಾನ್, ರಘವೀರ ಬಾಬುಗುಡ್ಡೆ, ಭರತ್ ಕುಮಾರ್ ಎಸ್, ಶಿವಪ್ರಸಾದ್, ಸಂಪತ್ ಕುಕ್ಯಾನ್ ಭಂಡಾರ ಮನೆ ಉಪಸ್ಥಿತರಿದ್ದರು.

📢 ಡೈಲಿ ಪಲ್ಸ್ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!