ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಸಿಗರೇಟ್ ಮಾರಾಟ: ಕಾರ್ಯಾಚರಣೆಗೆ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಸಿಗರೇಟ್ ಮಾರಾಟ: ಕಾರ್ಯಾಚರಣೆಗೆ ಸೂಚನೆ


ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಬಿಡಿಬಿಡಿಯಾಗಿ (ಚಿಲ್ಲರೆಯಾಗಿ) ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಸಹ, ಸಾರ್ವಜನಿಕ ಸ್ಥಳಗಳಲ್ಲಿ ಚಿಲ್ಲರೆಯಾಗಿ ಸಿಗರೇಟ್ ಮಾರಾಟ ಮಾಡುತ್ತಿರುವ ಹಾಗೂ ಹೋಟೆಲ್, ಕೆಫೆಗಳಲ್ಲಿ ಗ್ರಾಹಕರಿಗೆ ಧೂಮಪಾನ ಮಾಡಲು ಅವಕಾಶ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿಗಳನ್ನು ನಡೆಸಬೇಕು. ಕೋಟ್ಪಾ (COTPA - ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ರದ್ದುಗೊಳಿಸುವುದು ಸೇರಿದಂತೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಅವರು   ಧೂಮಪಾನದಿಂದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾತನಾಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article