ಸೌಜನ್ಯ ಪ್ರಕರಣ ಮರು ತನಿಖೆ: ಮಟ್ಟಣ್ಣನವರ್, ತಿಮರೋಡಿಗೆ ಎಸ್‌ಐಟಿ ನೋಟಿಸ್

ಸೌಜನ್ಯ ಪ್ರಕರಣ ಮರು ತನಿಖೆ: ಮಟ್ಟಣ್ಣನವರ್, ತಿಮರೋಡಿಗೆ ಎಸ್‌ಐಟಿ ನೋಟಿಸ್

ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಗಿರೀಶ್ ಮಟ್ಟಣ್ಣನವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿದೆ.

ಸಿಆರ್‌ಪಿಸಿ ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದ್ದು, ವಿಚಾರಣೆಗಾಗಿ ಮಂಗಳೂರಿನ ಎಸ್‌ಐಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಗಿರೀಶ್ ಮಟ್ಟಣ್ಣನವರ್ ಮುಂದಿನ ವಾರ ವಿಚಾರಣೆಗೆ ಹಾಜರಾಗಲಿದ್ದಾರೆ.

ಮಟ್ಟಣ್ಣನವರ್ ಹೇಳಿಕೆ..

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ಸಲ್ಲಿಸಿದ ರಿಟ್ ಅರ್ಜಿಯನ್ನು ಕರ್ನಾಟಕ ಹೈ ಕೋರ್ಟ್ ವಜಾಗೊಳಿಸಿದೆ. ಪ್ರಕರಣದ ತನಿಖೆಯನ್ನು ರದ್ದು ಪಡಿಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ ಎಂಬ ವರದಿ ಸತ್ಯಕ್ಕೆ ದೂರವಾದದು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article