ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಅಯ್ಕೆ
ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ. ಅಲ್ಲದೆ, ಕಾಲೇಜಿನ ಬಾಲಕರ ತಂಡವು ಸಮಗ್ರ ತಂಡ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ತಂಡವು ಸಮಗ್ರ ತಂಡ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದಿದೆ.
ಇದೇ ಸಂದರ್ಭದಲ್ಲಿ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರ್ಯ ಪಿ. ಗೌಡ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅದಿತ್ ಎನ್ ಅವರು ತಮ್ಮ ಉತ್ತಮ ಪ್ರದರ್ಶನದ ಮೂಲಕ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡದಲ್ಲಿ ಪ್ರಣವ್ ಎಂ. ಶೆಟ್ಟಿ ಪ್ರಥಮ ಪಿಯುಸಿ, ಆರ್ಯ ಪಿ. ಗೌಡ ಪ್ರಥಮ ಪಿಯುಸಿ, ಸಾಗರ್ ಕೆ. ದ್ವಿತೀಯ ಪಿಯುಸಿ, ಆದಿತ್ಯ ಎನ್. ದ್ವಿತೀಯ ಪಿಯುಸಿ ಭಾಗವಹಿಸಿರುತ್ತಾರೆ.
ಬಾಲಕಿಯರ ತಂಡದಲ್ಲಿ ಮೋಹನ ವಿ. ಗೌಡ ದ್ವಿತೀಯ ಪಿಯುಸಿ, ಲಾವಣ್ಯ ಯೋಗೀಶ್ ಪ್ರಥಮ ಪಿಯುಸಿ, ದೇಹಿಕಾ ದ್ವಿತೀಯ ಪಿಯುಸಿ, ಬೃಂದ ದ್ವಿತೀಯ ಪಿಯುಸಿ ಭಾಗವಹಿಸಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಸುರೇಖಾ ಆರ್. ಭಟ್ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.